ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಟಿಪ್ಪರ್ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಮುಚ್ಚಿರಪದವು ಪ್ರದೇಶದಲ್ಲಿ ನಡೆದಿದೆ.ಪಕಳಕುಂಜದಿಂದ ವಿಟ್ಲ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಪೆರುವಾಯಿ ಕಡೆ ಸಾಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ನಂತರ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಟಿಪ್ಪರ್ ಚಾಲಕ ಬಿಲಾಲ್ ಎಂಬಾತ ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪ್ರಶಾಂತ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಕಂಡಕ್ಟರ್ ಪ್ರಶಾಂತ್ ಅವರನ್ನು ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಟಿಪ್ಪರ್ ಚಾಲಕ ಅತೀವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ಕಂಡಕ್ಟರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೂ ಬಿಲಾಲ್ ಹಲ್ಲೆ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.