ಬಂಟ್ವಾಳ : ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕಿನ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ಅವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಗಿರಿಯಪ್ಪ ನೆರವೇರಿಸಿದರು.

ಬಳಿಕ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಮಾತನಾಡಿ, ಗ್ರಾಮ ಅಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾತೃಶ್ರೀ ಹೇಮಾವತಿ ಅಮ್ಮನವರ ಈ ಸಮಾಜಮುಖಿ ಕಾರ್ಯಕ್ರಮದಿಂದ ಅದೆಷ್ಟು ಕುಟುಂಬ ತನ್ನ ಸ್ವಂತ ಕಾಲಲ್ಲಿ ನಿಲ್ಲಲು ಸಹಕಾರಿಯಾಗಿದೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ಸವಿತ, ಸೇವಾಪ್ರತಿನಿಧಿ ಉಷಾ, ಸುಧಾ ಉಪಸ್ಥಿತರಿದ್ದರು. ಶೇಖರ್ ಸ್ವಾಗತಿಸಿ, ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!