ಬೈಂದೂರು ಬಳಿ ಸರಣಿ ಅಪಘಾತ: ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿ, ಹಲವರಿಗೆ ಗಾಯ

ಬೈಂದೂರು: ಬೈಂದೂರು–ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಸೇತುವೆ ಬಳಿ ಮಂಗಳವಾರ ಸಂಜೆ ಸರಣಿ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಾರಾಷ್ಟ್ರ ಮೂಲದ ಗೂಡ್ಸ್ ವಾಹನವು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಅದರ ಹಿಂದೆ ಬರುತ್ತಿದ್ದ ಕಾರು ಕೂಡ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಪ್ರಯಾಣಿಕರು ಹಾಗೂ ಗೂಡ್ಸ್ ವಾಹನ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಬಂದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿದುಬಂದಿದೆ. ಹಿಂಬದಿಯಿಂದ ಬಂದ ಕಾರಿನ ಏರ್‌ಬ್ಯಾಗ್ ತೆರೆಯಲ್ಪಟ್ಟಿದ್ದು, ದೊಡ್ಡ ಅನಾಹುತ ತಪ್ಪಿದೆ. ಅಪಘಾತದ ತೀವ್ರತೆಗೆ ಕಾರು ಹಾಗೂ ಗೂಡ್ಸ್ ವಾಹನ ಎರಡೂ ನಜ್ಜುಗುಜ್ಜಾಗಿವೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆಯ ಎಸ್‌ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!