ಶ್ರೀ ಚೀರುಂಭ ಭಗವತಿ ಕ್ಷೇತ್ರ ಉಳ್ಳಾಲದಲ್ಲಿ ದಕ್ಷಿಣ ದ್ವಾರದ ಶಿಲಾನ್ಯಾಸ ಹಾಗೂ ಉದ್ಘಾಟನಾ ಫಲಕ ಅನಾವರಣ

ಉಳ್ಳಾಲ: ಶ್ರೀ ಚೀರುಂಭ ಭಗವತಿ ಕ್ಷೇತ್ರದ ದಕ್ಷಿಣ ಭಾಗದ ಪ್ರವೇಶ ದ್ವಾರದ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ (28-03-2026) ಬೆಳಿಗ್ಗೆ 9:00 ಗಂಟೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.

ಕಾರ್ಯಕ್ರಮದ ಅಂಗವಾಗಿ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಲಾಯಿತು. ಅಸ್ತ್ರಗ್ರೂಪ್‌ನ CEO ಆಗಿರುವ ಶ್ರೀ ಲಂಚುಲಾಲ್ ಕೆ. ಎಸ್ ಅವರ ಕೊಡುಗೆಯಿಂದ ದಕ್ಷಿಣ ದ್ವಾರದ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಶುಭ ಹಾರೈಸಿದರು.

ಪೂಜಾ ವಿಧಿವಿಧಾನಗಳೊಂದಿಗೆ ಭೂಮಿ ಪೂಜೆ ನೆರವೇರಿಸಿ ಶಿಲಾನ್ಯಾಸ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಭಕ್ತರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಈ ದ್ವಾರದ ನಿರ್ಮಾಣದಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಸುಗಮ ಪ್ರವೇಶ ವ್ಯವಸ್ಥೆ ಲಭ್ಯವಾಗಲಿದ್ದು, ಕ್ಷೇತ್ರದ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!