ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

ಯಾದಗಿರಿ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಕಿರಣ, ಬಸಮ್ಮ, ಶರತ್ ಮತ್ತು ಹನುಮೇಶ್ ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳು ಹೊಂಡದಲ್ಲಿ ಈಜಲು ಹೋಗಿದ್ದರು ಎನ್ನಲಾಗಿದೆ.

ಈ ವೇಳೆ ಅನಾಹುತ ಸಂಭವಿಸಿ ನಾಲ್ವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಈ ದುರ್ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣ ಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!