ಗೇರುಕಟ್ಟೆ: ಸರ್ಕಾರಿ ಬಸ್ ಬಾಗಿಲು ತೆರೆದು ರಸ್ತೆಗೆ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು

ದಕ್ಷಿಣ ಕನ್ನಡ: ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ, ಸಂಚರಿಸುತ್ತಿದ್ದ ಸರ್ಕಾರಿ ಬಸ್‌ನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗಪ್ಪಳಿಸಿ ಗಾಯಗೊಂಡಿದ್ದಾರೆ.

ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ಬಸ್‌ನಿಂದ ಬಿದ್ದು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬಳು ಬೆಳ್ತಂಗಡಿಯ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಮತ್ತೊಬ್ಬಳು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯಾಗಿದ್ದು ಸಾರ್ವಜನಿಕ ಪರೀಕ್ಷೆ ಬರೆಯಲು ತೆರಳುತ್ತಿದ್ದಳು ಎಂದು ತಿಳಿದುಬಂದಿದೆ.

ಬಸ್‌ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ ಓವರ್‌ಲೋಡ್‌ನಿಂದ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಕುರಿತು ಹೆಚ್ಚಿನ ಪರಿಶೀಲನೆ ನಡೆಯುತ್ತಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!