ಸೂರಿಕುಮೇರು: ಅತೀವೇಗದ ಚಾಲನೆ – ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್

ಮಾಣಿ: ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದು ತಿಳಿದುಬಂದಿದೆ.

ಮಾಹಿತಿಯಂತೆ, ಅತೀವೇಗದಲ್ಲಿ ಸಂಚರಿಸುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ವಾಹನದ ಮುಂಭಾಗಕ್ಕೆ ಭಾರೀ ಹಾನಿಯಾಗಿದೆ.

ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವುದರಿಂದ, ವಾಹನಗಳು ಹೆಚ್ಚುವರಿ ವೇಗದಲ್ಲಿ ಸಂಚರಿಸುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ನಿಯಂತ್ರಣರಹಿತ ವೇಗ ಮತ್ತು ಅಜಾಗರೂಕ ಚಾಲನೆಯಿಂದ ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!