ಉಡುಪಿ: ಎ. 4 ರಂದು ಕಲಾಸೌರಭ ಕಾರ್ಯಕ್ರಮ.ಆಟಿಸಂ ಸೊಸೈಟಿ ಉಡುಪಿ ಆಯೋಜನೆ

ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.ಈ ವರ್ಷ “ಕಲಾಸೌರಭ” ಕಾರ್ಯಕ್ರಮವು “ವಿಶಿಷ್ಟತೆಗಳನ್ನು ಸಂಭ್ರಮಿಸಿ” ಎಂಬ ವಿಷಯವನ್ನು ಆಧರಿಸಿ ಎಪ್ರಿಲ್ 4ರ ಶನಿವಾರದಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4.30ರ ವರೆಗೆ ನಡೆಯಲಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಈ ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳು ಮತ್ತು ಪೋಷಕರನ್ನು ಪ್ರೋತ್ಸಾಹಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು. ಈ ಮೂಲಕ ಪೋಷಕರು ಸಾಮಾಜಿಕ ಕಳಂಕವನ್ನು ತೊಡೆದು ತಮ್ಮ ವಿಶೇಷ ಮಗುವಿನೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.

ಕಲಾಸೌರಭ’ದ ಉದ್ಘಾಟನಾ ಸಮಾರಂಭ ಏಪ್ರಿಲ್ 4 ರ ಬೆಳಿಗ್ಗೆ 9.45 ಗಂಟೆಗೆ ನಡೆಯಲಿದೆ. ಮೈಸೂರಿನ ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಸವಿತಾ ಸುಲುಗೋಡು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಧ್ಯಾಹ್ನ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಡಾ.ವಿರೂಪಾಕ್ಷ ದೇವರಮನೆ , ಸೌಜನ್ಯಾ ಶೆಟ್ಟಿ , ವಿಠಲ ಭಕ್ತ , ಕೀರ್ತೇಶ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!