ಬಂಟ್ವಾಳ: ಕಾರು ಪಲ್ಟಿ – ಕಾಲೇಜು ವಿದ್ಯಾರ್ಥಿಗಳು ಸೇರಿ ಆರು ಮಂದಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಸೇರಿ ಆರು ಮಂದಿ ಗಾಯಗೊಂಡ ಘಟನೆ ಬಿಸಿರೋಡು ಸಮೀಪದ ರಾಮಲ್ ಕಟ್ಟೆ ಪ್ರದೇಶದಲ್ಲಿ ಬುಧವಾರ ಮಧ್ಯರಾತ್ರಿ ನಡೆದಿದೆ.

ಗಾಯಗೊಂಡವರು ವಳಚ್ಚಿಲದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ವಿನಯ್, ಹೇಮಂತ್, ಸುಜನ್, ದೀಕ್ಷಾರಾಜ್, ಜೈಸನ್ ಹಾಗೂ ರಕ್ಷಾಸಾಮ್ರಾಟ್ ಗಾಯಗೊಂಡವರಾಗಿದ್ದಾರೆ.

ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳು ರಾತ್ರಿ ಸುಮಾರು 12 ಗಂಟೆಗೆ ಕಾಲೇಜಿನಿಂದ ಬಿಸಿರೋಡು ಕಡೆ ಚಹಾ ಕುಡಿಯಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಮಲ್ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಾಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಉಪನಿರೀಕ್ಷಕ ಆದರ್ಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!