ಅಕ್ರಮ ಜಾನುವಾರು ಸಾಗಾಟ ಪತ್ತೆ: 19 ಜಾನುವಾರುಗಳು ವಶ, ಓರ್ವ ಬಂಧನ

ಕಡಬ : ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ, ಅಮಾನುಷವಾಗಿ ಸಾಗಿಸಲಾಗುತ್ತಿದ್ದ 19 ಜಾನುವಾರುಗಳನ್ನು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಶುಕ್ರವಾರ ಬೆಳಗಿನ ಜಾವ ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡರು. ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ.


ಕಾರ್ಯಾಚರಣೆಯನ್ನು ಸಬ್‌ ಇನ್ಸ್‌ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದಲ್ಲಿ ನಡೆಸಲಾಗಿದ್ದು, ಹೊಸೂರು ಮೂಲದ ಅಕ್ರಮ್ ಪಾಷಾ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಅವನಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

SHARE
Loading spinner

Leave a Reply

Your email address will not be published. Required fields are marked *

error: Content is protected !!