ಪುತ್ತೂರು–ಸುಳ್ಯ ಹೆದ್ದಾರಿಯಲ್ಲಿ ಪಿಕಪ್ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ

ಪುತ್ತೂರು (ದಕ್ಷಿಣ ಕನ್ನಡ):
ಪುತ್ತೂರು–ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಲೈಟಿಂಗ್ಸ್ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮೋರಿಗೆ ಡಿಕ್ಕಿ ಹೊಡೆದು ಜಖಂಗೊಂಡ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ವಾಹನಕ್ಕೆ ಭಾರೀ ಹಾನಿಯಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ.

ಈ ಪಿಕಪ್ ಸುಳ್ಯ ಮರ್ಕಂಜದ ಲೈಟಿಂಗ್ಸ್ ಅಂಗಡಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!