118ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಜಂಟಿ ಆಶ್ರಯದಲ್ಲಿ 118ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಏಪ್ರಿಲ್ 6 ರಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣ .ಕೆ .ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ಎಸ್ .ವಿ .ಎಸ್ .ಟೆಂಪಲ್ ಪದವಿ ಪೂರ್ವ ಕಾಲೇಜು ಬಂಟ್ವಾಳ ಪ್ರಾಂಶುಪಾಲರಾದ ಕೆ.ಎನ್ .ಗಂಗಾಧರ ಆಳ್ವ ಅವರು ವಹಿಸಿ ಮಾತನಾಡಿದರು ವಿದ್ಯಾರ್ಥಿಗಳು ಸಾಹಿತ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿ ಮುಂದಿನ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ .ಪತ್ರಿಕೆ ,ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ. ಮೊಬೈಲನ್ನು ಮಿತವಾಗಿ ಬಳಸಿ ವೆಂದರು. ಓರ್ವ ಮಹಿಳೆ ಶಿಕ್ಷಣ ಪಡೆದರೆ ಇಡೀ ಕುಟುಂಬ ಇಡೀ ಸಮಾಜವನ್ನು ವಿದ್ಯಾವಂತರನ್ನಾಗಿ ಮಾಡುತ್ತಾರೆ.
ಆದ್ದರಿಂದ ಕಲಿತ ವಿದ್ಯೆಗೆ ಕೊನೆ ಇಲ್ಲ ವಿದ್ಯೆ, ಸಾಹಿತ್ಯ ನಮ್ಮನ್ನು ಸಂತೋಷದಲ್ಲಿ ಇರುವಂತೆ ಮಾಡುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಶಾರದಾ ಪಿ.ಯು ಕಾಲೇಜ್, ಮಂಗಳೂರು ಉಪ ಪ್ರಾಂಶುಪಾಲರಾದ ಅರುಣ ಕುಮಾರಿ ಕೆ ಹಾಗೂ ವಿಜಯ ಕರ್ನಾಟಕ ದೈನಿಕ ಪತ್ರಿಕೆಯ ಪ್ರಧಾನ ವರದಿಗಾರರಾದ ಮುಹಮ್ಮದ್ ಆರಿಫ್ ಪಡುಬಿದ್ರೆ ಅತಿಥಿಗಳಾಗಿ ಉಪಸ್ಥಿತರಿದ್ದರು ಶುಭ ಹಾರೈಸಿದರು ನಿವೃತ್ತ ಶಿಕ್ಷಕಿ, ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಎಲ್ಲರನ್ನೂ ಸ್ವಾಗತಿಸಿದರು. ಕನ್ನಡ ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು.