ಮೂಡುಬಿದ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಕಾಣೆಯಾದ ಪ್ರಕರಣ ದಾಖಲು

ಮೂಡುಬಿದ್ರೆ:
ಮೂಡುಬಿದ್ರೆ ತಾಲೂಕಿನ ಮಾರ್ಪಾಡಿ ಗ್ರಾಮದ ವಿಜಯ (62) ಎಂಬವರು ಕಾಣೆಯಾಗಿರುವ ಕುರಿತು ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿಯ ಪ್ರಕಾರ, ಕಳೆದ ಸುಮಾರು 12 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವಿಜಯ ಅವರು ಮಾರ್ಚ್ 28ರಂದು ರಾತ್ರಿ ಮನೆಯಿಂದ ಹೊರಗೆ ತೆರಳಿದ ನಂತರ ವಾಪಾಸು ಮನೆಗೆ ಬಂದಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಚಹರೆ ವಿವರ:
ವಿಜಯ ಅವರು ಗೋದಿ ಮೈಬಣ್ಣ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ನೈಟಿ ಧರಿಸಿದ್ದರು ಎಂದು ತಿಳಿದುಬಂದಿದೆ.

ಕಾಣೆಯಾದವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ ಮೂಡುಬಿದ್ರೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!