ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ನಿವಾಸಿ ಮಹಮ್ಮದ್ ಸಲ್ಮಾನ್, ಬಂಧಿತ ಯುವಕ. ದಿನಾಂಕ 30.03.2026 ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸುಳ್ಯ ಕೆಮ್ರಾಜೆ ಎಲಿಮಲೆ ಎಂಬಲ್ಲಿ ಪ್ರಕರಣದ ಆರೋಪಿತನಾದ ಆರೋಪಿ (35) ಎಂಬಾತನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿತನಿಂದ ಕಳವು ಮಾಡಿದ 2000 ರೂಪಾಯಿ ನಗದು ಹಣವನ್ನು ಸ್ವಾದೀನಪಡಿಸಿಕೊಂಡು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.