ಕಾರ್ಕಳ ಪುರಸಭೆಯಲ್ಲಿ ಆರ್‌ಟಿಐ ಗೊಂದಲ – ಮಾಹಿತಿ ಸಿಗದೆ ಕಛೇರಿಯಲ್ಲೇ ಪ್ರತಿಭಟನೆ

ಉಡುಪಿ: ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯ ಸುನೀಲ್ ಕೋಟ್ಯಾನ್ ಪುರಸಭೆ ಕಛೇರಿಯೊಳಗೆ ಮಾಹಿತಿ ಹಕ್ಕು ಅಧಿಕಾರಿ ಟೇಬಲ್ ಮುಂಭಾಗದಲ್ಲಿ ಪ್ರತಿಭಟನೆ ಕುಳಿತ ಘಟನೆ ನಡೆದಿದೆ.


ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಅಂಬಾಭವಾನಿ ದೇವಸ್ಥಾನ ರಸ್ತೆಗೆ ಪುರಸಭಾ ವತಿಯಿಂದ 2011 – 2012 ಸಾಲಿನಲ್ಲಿ ಡಾಮಾರೀಕಣ ನಡೆಸಲಾಗಿತ್ತು ತದನಂತರ ಪುನಃ ಅದೇ ರಸ್ತೆಗೆ ಮರು ಡಾಮಾರಿಕರಣ ನಡೆಸಲಾಗಿದೆ ಆದರೆ ಈ ರಸ್ತೆಯನ್ನು ಹಾಗೂ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು ಉದ್ಯಮಿಯೊಬ್ಬರು ಲೇಔಟ್ ಮಾಡಿ ಮುಚ್ಚಿ ಹಾಕಿದ್ದಾರೆ ಅಧಿಕಾರಿಗಳು ಉದ್ಯಮಿಗಳಿಗೆ ಸಹಕಾರ ನೀಡುತ್ತಿದ್ದು ಪುರಸಭೆ ಅಧಿಕಾರಿಗಳು ರಸ್ತೆ ಕೆಲಸನೇ ಮಾಡಿಸಿಲ್ಲ ಎಂದು ಹೇಳುತ್ತಿದ್ದು ಮಾಹಿತಿ ನೀಡುತ್ತಿಲ್ಲ ಕೇಳಿದರೆ ಮೆಲ್ಮನವಿ ಸಲ್ಲಿಸಿ ಎಂದು ಮಾಹಿತಿ ಹಕ್ಕು ಅಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ಸುನಿಲ್ ಕೋಟ್ಯಾನ್ ಆರೋಪಿಸಿ ನನಗೆ ನ್ಯಾಯ ಸಿಗುವರೆಗೆ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!