ವೇದಿಕೆಯಲ್ಲಿ ಕುಸಿದು ಯುವ ನಿರೂಪಕ ಸಾವು – ಬಂಟ್ವಾಳದಲ್ಲಿ ದುರ್ಘಟನೆ

ಬಂಟ್ವಾಳ: ಯುವ ನಿರೂಪಕನೋರ್ವ ಮದರಂಗಿ‌ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.


ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾನೆ.
ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದುದ್ದಾಗಿದೆಯಾದರೂ ಅದಾಗಲೇ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!