ಮಹಮ್ಮದ್ ನಂದರಬೆಟ್ಟು ಅಗಲಿಕೆ: ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕಂಬನಿ

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ಮಹಮ್ಮದ್ ನಂದರಬೆಟ್ಟು ಅವರ ನಿಧನಕ್ಕೆ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ಸಮಾಜಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟ ಉಂಟುಮಾಡಿದೆ ಎಂದು ತಿಳಿಸಿದ್ದಾರೆ.

ಮೂರು ಬಾರಿ ಬಂಟ್ವಾಳ ಪುರಸಭೆಗೆ ಆಯ್ಕೆಯಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮಹಮ್ಮದ್ ನಂದರಬೆಟ್ಟು ಅವರು, ತಮ್ಮ ಕಾರ್ಯಕಾಲದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು. ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಅವರು, ಒಂದು ಬಾರಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಮನ ಗೆದ್ದ ನಾಯಕರಾಗಿದ್ದರು.

ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದರು. ಸದಾ ಹಸನ್ಮುಖಿ ಸ್ವಭಾವದ ಜೊತೆಗೆ, ಕ್ರೀಡಾಪಟುವಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರರಾಗಿ ಮಿಂಚಿದ ಅವರು, ಕ್ರೀಡಾಪೋಷಕರಾಗಿಯೂ ಗುರುತಿಸಿಕೊಂಡಿದ್ದರು.

ಇವರ ಅಗಲಿಕೆಯಿಂದ ಪಕ್ಷಕ್ಕೆ ಮಾತ್ರವಲ್ಲದೆ ಸಮಾಜಕ್ಕೂ ದೊಡ್ಡ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಸಂಘಟನೆಯ ವತಿಯಿಂದ ಸಂತಾಪ ಸೂಚಿಸಿದ್ದಾರೆ.

SHARE
Loading spinner

3 thoughts on “ಮಹಮ್ಮದ್ ನಂದರಬೆಟ್ಟು ಅಗಲಿಕೆ: ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕಂಬನಿ

  1. Superjili is my go-to online casino when I’m bored. Always something new to try and the bonuses are pretty sweet. No complaints here! Try Superjili superjili, you might like it

    Loading spinner

Leave a Reply

Your email address will not be published. Required fields are marked *

error: Content is protected !!