ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾ ಸಮಾವೇಶ ಏಪ್ರಿಲ್ 20ರಂದು

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ ಎ.20ರಂದು ಬೆಳಗ್ಗೆ 9 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಳ್ ತಿಳಿಸಿದರು .

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ. ಬ್ರಿಜೇಶ್ ಚೌಟ ಸಹಿತ ಮುಂತಾದ ರಾಜಕೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು .

ಸಮಾವೇಶದಲ್ಲಿ ಸುಮಾರು 2,500 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಲಿದ್ದಾರೆ. ಸಂಘದ ಪಾಧಿಕಾರಿಗಳಾಗಿದ್ದು, ನಿವೃತ್ತರಾದವರಿಗೆ ಸಮ್ಮಾನ ನಡೆಯಲಿದ್ದು, ಸಂಘದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಸಹಾಯಕರಿಗೆ ಕನಿಷ್ಠವೇತನ ಜಾರಿಗೆ ಸಂಬಂಧಿಸಿದ ವಿಚಾರ ಈಗಾಗಲೇ ನ್ಯಾಯಾಯದಲ್ಲಿ ವಿಚಾರಣೆ ಹಂತದಲ್ಲಿದೆ. ವೇತನ ಜಾರಿಗೆ ಆಗ್ರಹಿಸಿ ಸಚಿವರಿಗೆ ಮನವಿಯನ್ನು ಈ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದರು .

ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯರಾದ ವಿಶಾಲಾಕ್ಷಿ, ಆಶಾಲತಾ, ಚಂದ್ರಾವತಿ, ಬಂಟ್ವಾಳ ತಾಲೂಕು ಅಧ್ಯಕ್ಷೆ ವಿಜಯವಾಣಿ, ರಾಜೀವಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!