ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಸಮಾರೋಪ: ಏಪ್ರಿಲ್ ೧೮ರಂದು ವೈಭವದ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು, ತುಳುನಾಡಿನ ವೀರ ವನಿತೆ ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಆಕೆಯ ಇತಿಹಾಸವನ್ನುನಾಡಿನ ಯುವ ಜನಾಂಗಕ್ಕೆ ಪರಿಚಯಿಸುವ ಕಾರ್ಯ ನಡೆಸಿದ್ದು ಇದರ ಸಮಾರೋಪ ಸಮಾರಂಭ ಹಾಗೂ ಅಬ್ಬಕ್ಕ @ ಐನೂರರ ಸಂಭ್ರಮದಲ್ಲಿ ಅಬ್ಬಕ್ಕ ನೆನಪಿನೈಸಿರಿ ಎಂಬ ಸಂಚಿಕೆ ಲೋಕಾರ್ಪಣೆ ಕಾರ್ಯಕ್ರಮ ನಿರ್ಮಲ ಭಾರತ ಚಾರಿಟಬಲ್ ಟ್ರಸ್ಟ್ ಇದರ ಸಹಯೋಗದೊಂದಿಗೆ ಎಪ್ರಿಲ್ 18 ರಂದು ಸಂಜೆ 5 ಗಂಟೆಯಿಂದ ಉಳ್ಳಾಲದ ಶಾರದಾನಿಕೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೆ ಆರ್ ಎಂ ಎಸ್ ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ ಮಾಧವ ಎಂ ಕೆ ತಿಳಿಸಿದರು .

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ , ಅಬ್ಬಕ್ಕ @ 500 ಪ್ರೇರಣಾದಾಯಿ ಕಾರ್ಯಕ್ರಮದ ಅಡಿಯಲ್ಲಿ 100 ಉಪನ್ಯಾಸ ಸರಣಿ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದರು .

ಕಾರ್ಯಕ್ರಮದಲ್ಲಿ ಅಬ್ಬಕ್ಕ ವಂಶಸ್ಥರಾದ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ, ಅಖಿಲ ಭಾರತೀಯ ಸಹ ಬೌದ್ಧಿಕ ಪ್ರಮುಖ್ ಸುಧೀರ್ ಸಮಾರೋಪ ಭಾಷಣವನ್ನು ಮಾಡಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಇಲ್ಲಿನ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇಣೂರು ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ಇಂದ್ರ ಭಾಗವಹಿಸಲಿರುವರು, ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಿ ಎಸ್ ಪ್ರಕಾಶ್, ಡಾ. ಗುರುನಾಥ ಬಡಿಗೇರ್, ಸಂದೀಪ್ ಬೂದಿಹಾಳ್, ಕೆ ರಮೇಶ್ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಇಲ್ಲಿನ ಸಂಸ್ಥಾಪಕರಾದ ಡಾ. ತುಕಾರಾಮ ಪೂಜಾರಿ ಹಾಗೂ ಡಾ.ಆಶಾಲತಾ ಎಸ್ ಸುವರ್ಣ ಇವರಿಗೆ ಗೌರವ ಸಮರ್ಪಣೆ ನಡೆಯಲಿರುವುದು. ಕಾರ್ಯಕ್ರಮದಲ್ಲಿ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತ ಗುರು ರಾಜಶ್ರೀ ಉಳ್ಳಾಲ್ ನಾಟ್ಯನಿಕೇತನ ಕೊಲ್ಯಾ ಇವರ ಶಿಷ್ಯ ವೃಂದದಿಂದ ನೃತ್ಯ ಮೋಹನ ಹಾಗೂ ವೀರರಾಣಿ ಅಬ್ಬಕ್ಕ ಕಿರು ನೃತ್ಯ ರೂಪಕ ಪ್ರಸ್ತುತ ಪಡಿಸಲಿದ್ದಾರೆ ಎಂದರು .

ಪತ್ರಿಕಾಗೋಷ್ಠಿಯಲ್ಲಿ ನಿರ್ಮಲ ಭಾರತ್ ಚಾರಿಟಬಲ್ ಟ್ರಸ್ಟ್ ವಿಶ್ವಸ್ಥರಾದ ಜಿತೇಂದ್ರ ಶೆಟ್ಟಿ, ದ . ಕ ಕೆ ಆರ್ ಎಂ ಎಸ್ ಎಸ್ ಅಧ್ಯಕ್ಷರಾದ ಡಾ ಸುಧಾ ಯು, ಕೆ ಆರ್ ಎಂ ಎಸ್ ಎಸ್ ರಾಜ್ಯ ಮಾಧ್ಯಮ ಪ್ರಮುಖ್ ಮಮತಾ ಶೆಟ್ಟಿ ಉಪಸ್ಥಿತರಿದ್ದರು .

SHARE
Loading spinner

Leave a Reply

Your email address will not be published. Required fields are marked *

error: Content is protected !!