ಕಾಪು: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ರಾ.ಹೆ. 66ರಲ್ಲಿ ನಡೆದಿದೆ.

ಕಾರು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದು, ಪಾಂಗಾಳ ಕಟ್ಟಿಕೆರೆಗೆ ಸಮೀಪಿಸುತ್ತಿದ್ದಂತೆ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದರೆ, ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾಪು ಪೋಲಿಸ್ ಭೇಟಿ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!