ಬಂಟ್ವಾಳ: ಮಾಜಿ ಸೈನಿಕನೊಬ್ಬರ ಮನೆಯ ಅಂಗಳಕ್ಕೆ ಅಕ್ರಮವಾಗಿ ನುಗ್ಗಿದ ನಾಲ್ವರು ವ್ಯಕ್ತಿಗಳು ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ.
ಸಜಂಕಬೆಟ್ಟು ನಿವಾಸಿ ಮಾಜಿ ಸೈನಿಕ ಎಸ್. ಪುಷ್ಪರಾಜ್ ಅವರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ನಾವೂರ ನಿವಾಸಿಗಳಾದ ವಿಜಯ್, ಸಿರಿಲ್ ಹಾಗೂ ಇಬ್ಬರು ಅಪರಿಚಿತರು ಇನ್ನೋವಾ ಕಾರಿನಲ್ಲಿ ಬಂದು ಮನೆಯ ಅಂಗಳಕ್ಕೆ ನುಗ್ಗಿ, ಅವಾಚ್ಯ ಶಬ್ದಗಳಿಂದ ಬೈದು ತಲವಾರು ಹಿಡಿದು ಬೆದರಿಕೆ ಹಾಕಿದ್ದಾರೆ.
ವೈಯಕ್ತಿಕ ವೈಷಮ್ಯವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.