ಕುಂದಾಪುರ: ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ- ಇಬ್ಬರು ಕಳ್ಳರ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೋಸರು ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, ಮೂರು ಮೊಬೈಲ್ ಫೋನ್‌ಗಳು ಹಾಗೂ ಕಳವು ಮಾಡಲಾದ ದೇವಸ್ಥಾನದ ಕಾಣಿಕೆ ಹುಂಡಿ ಸಹಿತ ಅಂದಾಜು 1.50 ಲಕ್ಷ ರೂ.ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!