ಆತ್ರಾಡಿ: ತಾಯಿ-ಮಗಳ ಹತ್ಯೆ ಪ್ರಕರಣ- ಆರೋಪಿಗೆ ಜೀವಾವಧಿ ಶಿಕ್ಷೆ

ಉಡುಪಿ: 2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ–ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ತೀರ್ಪು ನೀಡಿದೆ. ಅತ್ರಾಡಿ ಗ್ರಾಮದ ಮದಗ ಪ್ರದೇಶದ ನಿವಾಸಿ ಚೆಲುವಿ ಹಾಗೂ ಆಕೆಯ ಅಪ್ರಾಪ್ತ ವಯಸ್ಕ ಮಗಳು ಪ್ರಿಯಾ ಅವರ ಮೃತದೇಹಗಳು 2022ರ ಮೇ 9ರಂದು ಮನೆಯಲ್ಲಿ ಪತ್ತೆಯಾಗಿದ್ದವು. ಮೇ 8ರ ಸಂಜೆದಿಂದ 9ರ ಬೆಳಗಿನ ನಡುವಿನ ಅವಧಿಯಲ್ಲಿ ಅಪರಾಧ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿತ್ತು. ಇಬ್ಬರನ್ನೂ ಕತ್ತು ಹಿಸುಕಿಕೊಂಡು ಕೊಲೆ ಮಾಡಿರುವುದು ದೃಢಪಟ್ಟಿತ್ತು.


ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿ, ತನಿಖೆಯನ್ನು ಅಂದಿನ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಅವರು ನಡೆಸಿ, ಭದ್ರಾವತಿ ತಾಲೂಕಿನ ಜನ್ನಾಪುರ ನಿವಾಸಿ ಹರೀಶ್ ಆರ್ ಯಾನೆ ಗಣೇಶ್ (30) ಎಂಬತನನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರು ಆರೋಪಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ₹20,000 ದಂಡ ವಿಧಿಸಿದ್ದಾರೆ. ಈ ತೀರ್ಪಿನಿಂದ ನಾಲ್ಕು ವರ್ಷಗಳ ಕಾಲ ನಡೆದ ವಿಚಾರಣೆಗೆ ತೆರೆ ಬಿದ್ದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!