ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ವ್ಯಕ್ತಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಬಿಳಿ ಬಣ್ಣದ ತುಂಬು ತೋಳಿನ ಅಂಗಿಯನ್ನು ಧರಿಸಿದ್ದಾನೆ. ಅಲ್ಲದೆ, ಅವನ ಬಲ ಕೈಯಲ್ಲಿ ಕೆಂಪು ದಾರ ಕಟ್ಟಿರುವುದು ಗುರುತು ಲಕ್ಷಣವಾಗಿ ಕಂಡುಬಂದಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಬಂಟ್ವಾಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದು, ತಮ್ಮ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಗಂಡಸು ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದಲ್ಲಿ ಅಥವಾ ಈ ಮೃತದೇಹದ ಬಗ್ಗೆ ಮಾಹಿತಿ ಇದ್ದಲ್ಲಿ ತಕ್ಷಣ ಬಂಟ್ವಾಳ ನಗರ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.
ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
¡Qué onda, raza! Probé betmxscasino and it’s pretty cool for the Mexican market. Good selection of games and feels trustworthy. ¡Échenle un vistazo! betmxscasino
The variety of games here is insane. I spent hours just exploring the options. Everything loads fast and the experience is top notch. joinr39
For anyone who loves a real challenge, this is the place to be. The competition is fierce and the gameplay is incredibly smooth. royalflushpoker