ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ, ಮೇ 7: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ರ.260/2014, ಭಾರತೀಯ ದಂಡ ಸಂಹಿತೆ 306ರ ಪ್ರಕರಣದ ಆರೋಪಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿದೇಶದಿಂದ ಭಾರತಕ್ಕೆ ಹಿಂದಿರುಗುತ್ತಿದ್ದ ವೇಳೆ, ಸಹರಾ ಪೊಲೀಸ್ ಠಾಣೆ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SHARE
Loading spinner

3 thoughts on “ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

  1. I’ve been looking for a reliable spot like this for a while. The interface is super smooth and the payouts are fast. Definitely my new favorite thmx66

    Loading spinner

Leave a Reply

Your email address will not be published. Required fields are marked *

error: Content is protected !!