ಬಂಟ್ವಾಳ: ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ನಝೀರ್ ಟಿ.ಎಂ. ನಿಧನ

ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ನಝೀರ್ ಟಿ.ಎಂ. (57) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ತಲಪಾಡಿ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನಝೀರ್ ಅವರು ಸೌಮ್ಯ ಸ್ವಭಾವ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಮನ ಗೆದ್ದಿದ್ದರು. ಎಲ್ಲರೊಂದಿಗೆ ಆತ್ಮೀಯತೆಯಿಂದ ಬೆರೆಯುತ್ತಿದ್ದ ಅವರು ಸಮುದಾಯದಲ್ಲಿ ಅಪಾರ ಗೌರವಕ್ಕೆ ಪಾತ್ರರಾಗಿದ್ದರು.

ಮೃತರು ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಗುರುವಾರ ತಲಪಾಡಿಯ ಮೊಫತ್ಲಾಲ್ ವಠಾರದ ದಫನ ಭೂಮಿಯಲ್ಲಿ ನೆರವೇರಿತು. ನಝೀರ್ ಅವರ ನಿಧನಕ್ಕೆ ತಲಪಾಡಿ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಹಾಗೂ ಅಲ್ ರಹ್ಮಾ ಫೌಂಡೇಶನ್ ತಲಪಾಡಿ ವತಿಯಿಂದ ಸಂತಾಪ ಸೂಚಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!