7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಎಸ್.ಎನ್. ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಪೊಲೀಸ್ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ವೃಷಭ ಹಾಗೂ ಕಾನ್ಸ್ಟೇಬಲ್ ಚರಣ್ ರಾಜ್ ಅವರು ಮೈಸೂರು ಜಿಲ್ಲೆಯ ಸರಗೂರು ಸಮೀಪದ ಹೆಚ್.ಡಿ.ಕೋಟೆ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!