ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು – ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವವು ಬಿ. ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು.


ಬಂಟ್ವಾಳ ಘಟಕದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ, ಅಗ್ರಜ ಬಿಲ್ಡರ್ಸ್’ನ ಮಾಲಕರಾದ ಸಂದೇಶ್ ಶೆಟ್ಟಿ, ಸಂಚಾಲಕರಾದ ಭುವನೇಶ್ ಪಚ್ಚಿನಡ್ಕ, ಶ್ರೀಧರ ಶೆಟ್ಟಿ ಪುಳಿಂಚ, ಗೌರವಾಧ್ಯಕ್ಷರಾದ ಜಗನ್ನಾಥ ಚೌಟ, ನಿಕಟಪೂರ್ವ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಮತ್ತು ಘಟಕದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಯಕ್ಷಗಾನ ಕಲಾವಿದರಾದ ಸರಪಾಡಿ ಅಶೋಕ್ ಶೆಟ್ಟಿ ಹಾಗೂ ಶ್ರೀ ಕ್ಷೇತ್ರ ಬಾಚಕೆರೆಯ ಧರ್ಮದರ್ಶಿಗಳಾದ ಶ್ರೀ ದೇಜಪ್ಪ ಬಾಚಕೆರೆ ಇವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಬಂಟ್ವಾಳ ಘಟಕದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಪರಾರಿಗುತ್ತು ಸ್ವಾಗತಿಸಿದರು. ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಪಾವಂಜೆ ಮೇಳದವರಿಂದ ಛಾಯಾನಂದನ ಯಕ್ಷಗಾನ ಬಯಲಾಟ ಜರುಗಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!