ಬಕ್ರೀದ್ ವೇಳೆ ಅಕ್ರಮ ಸಾಗಾಣಿಕೆ ವಿರುದ್ಧ ಎಚ್ಚರಿಕೆ-ಪುತ್ತೂರು ಪೊಲೀಸರಿಗೆ ವಿಹಿಂಪ-ಬಜರಂಗದಳ ಮನವಿ ಸಲ್ಲಿಕೆ

ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಇಂದು ಪುತ್ತೂರು ನಗರ ಪೋಲಿಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ,ಜಿಲ್ಲಾ ಉಪಾಧ್ಯಕ್ಷರಾದ ಸತೀಶ್ ಬಿ.ಎಸ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ಜಿಲ್ಲಾ ಸತ್ಸಂಗ ಪ್ರಮುಖ್ ರವಿಕುಮಾರ್ ಕೆಯ್ಯೂರು,ಸಹ ಸತ್ಸಂಗ ಪ್ರಮುಖ್ ರಾಜರಾಮ್ ಐತಾಳ್,ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಮಾಣಿ , ಬಜರಂಗದಳ ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ,ಸಂತೋಷ್ ಉಪ್ಪಿನಂಗಡಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!