ಸಂತ ಫಿಲೋಮಿನಾ ಪಿಯು ಕಾಲೇಜಿನಲ್ಲಿ ‘ಫಿಲೋ ಆರಂಭ’ ಕಾರ್ಯಕ್ರಮ

2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವಕ್ಕೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ‘ಫಿಲೋ ಆರಂಭ’ ಕಾರ್ಯಕ್ರಮ ಮೇ 25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ಡಾ. ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಅವರು ಪ್ರಥಮ ಪಿಯುಸಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.

“ಹತ್ತನೇ ತರಗತಿಯ ನಂತರ ನಿಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ಉತ್ತಮ ನಿರ್ಧಾರ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲ ಸೌಕರ್ಯಗಳು ಲಭ್ಯವಿದ್ದು, ಅನುಭವಿ ಪ್ರಾಧ್ಯಾಪಕರ ತಂಡ ನಿಮ್ಮ ಯಶಸ್ಸಿಗಾಗಿ ಶ್ರಮಿಸುತ್ತದೆ. ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು,” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ವಾರ್ಷಿಕ ಸಂಚಿಕೆ ‘ಫಿಲೋ ದರ್ಶನ’ ಬಿಡುಗಡೆಗೊಳಿಸಲಾಯಿತು.

ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ರೈ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಉಪನ್ಯಾಸಕರಾದ ಹರ್ಷಿತ್ ಕುಮಾರ್ ಸ್ವಾಗತಿಸಿದರು. ಅವಿನಾ ಮಾಡ್ತಾ ವಂದಿಸಿದರು. ಸುಮಾ ಡಿ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!