ಉಡುಪಿ: ಟೈಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ; ಚಾಲಕ ಪಾರು

ಉಡುಪಿ: ಟೈಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಗರದ ಅಂಬಾಗಿಲು ಜಂಕ್ಷನ್ ಸಮೀಪ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಕುಂದಾಪುರದತ್ತ ಸಾಗುತ್ತಿದ್ದ ಲಾರಿ ಅಂಬಾಗಿಲು ಜಂಕ್ಷನ್ ಬಳಿ ತಲುಪುತ್ತಿದ್ದಂತೆ ಹಿಂಬದಿಯ ಟೈಯರ್ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಬದಿಗೆ ಪಲ್ಟಿಯಾಗಿದೆ.

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಮೀನುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿಗೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಉಡುಪಿ ಸಂಚಾರ ಪೊಲೀಸ್‌ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಂಡು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿದರು.

ಅಪಘಾತದಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ಬಳಿಕ ಪರಿಸ್ಥಿತಿ ಸಹಜಗೊಂಡಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!