ಮಾಣಿ ಸಮೀಪ ಭೀಕರ ಅಪಘಾತ: ದ್ವಿಚಕ್ರವಾಹನ ಸವಾರ ಸಾವು:ಮೀನಿನ ಲಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ್ಯು

ಪುತ್ತೂರು: ಮೀನಿನ ಲಾರಿ ಹಾಗೂ ದ್ವಿಚಕ್ರವಾಹನದ ಮಧ್ಯೆ ನಡೆದ ಅಪಘಾತದಲ್ಲಿ ದ್ವಿಚಕ್ರ ಸವಾರ ಗಂಭೀರಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಮೇ.೨೫ರಂದು ಮಾಣಿ ಸಮೀಪ ನಡೆದಿದೆ.

ಮೃತರನ್ನು ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದ‌ರ್ ಷಾ ಎಂದು ಗುರುತಿಸಲಾಗಿದೆ. ಅವರು ಕೆಲವು ವರ್ಷಗಳಿಂದ ಪುತ್ತೂರು ಸಂಟ್ಯಾರಿನಲ್ಲಿ ವಾಸವಾಗಿದ್ದರು.

ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ದ್ವಿಚಕ್ರವಾಹನ ಮೀನಿನ ಲಾರಿಗೆ ಡಿಕ್ಕಿಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತರು
ಮಂಗಳೂರಿನ ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದು, ವಿವಾಹಿತರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

.

SHARE
Loading spinner

Leave a Reply

Your email address will not be published. Required fields are marked *

error: Content is protected !!