ಹಿರಿಯ ಕಾಂಗ್ರೆಸ್ ನಾಯಕ ಅಬ್ದುಲ್ ರಹಿಮಾನ್ ಕನ್ಯಾನಗೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಹುದ್ದೆ

ಬಂಟ್ವಾಳ: ಪಕ್ಷವನ್ನು ತಳಮಟ್ಟದಲ್ಲಿ ಇನ್ನಷ್ಟು ಬಲಪಡಿಸುವ ಹಾಗೂ ಸಂಘಟನಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ಉದ್ದೇಶದಿಂದ ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ಕನ್ಯಾನ ಅವರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ನೇಮಕ‌ ಮಾಡಿರುತ್ತಾರೆ.

ಅಬ್ದುಲ್ ರಹಿಮಾನ್ ಅವರು ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದು, ಗಡಿನಾಡು ಗ್ರಾಮ ಪಂಚಾಯತ್‌ನಲ್ಲಿ ನಾಲ್ಕು ಬಾರಿ ಸದಸ್ಯರಾಗಿ, ಎರಡು ಬಾರಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಗಮನಾರ್ಹ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ಸ್ಥಳೀಯ ಆಡಳಿತ ಮತ್ತು ಜನಸೇವೆಯಲ್ಲಿ ಅವರ ಅನುಭವ ಹಾಗೂ ಸಂಘಟನಾ ಸಾಮರ್ಥ್ಯಕ್ಕೆ ಪಕ್ಷದ ನಾಯಕತ್ವ ಮೆಚ್ಚುಗೆ ವ್ಯಕ್ತಪಡಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!