ಉಡುಪಿ, ಜೂನ್ 4: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ D. K. Shivakumar ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ನಗರದ ಕಿನ್ನಿಮೂಲ್ಕಿ ಸಮೀಪ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಜೈಕಾರ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು. ನೂತನ ಮುಖ್ಯಮಂತ್ರಿಯ ನೇತೃತ್ವಕ್ಕೆ ಬೆಂಬಲ ಸೂಚಿಸಿದ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸ್ವಾಗತ ಗೋಪುರವನ್ನು ನಿರ್ಮಿಸಿ, ಅದರ ಮೂಲಕ ಸಂಚರಿಸುವ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡರು.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವುದು ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂಬ ವಿಶ್ವಾಸವನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.