ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರು ಅಸ್ವಸ್ಥಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ನಲ್ಲಿ ನಡೆದಿದೆ.ಟ್ರೈನ್ ನಂಬರ್ 16511ರಲ್ಲಿ ಬೆಂಗಳೂರಿಂದ ಹೊರಟು ತಲಚೇರಿಗೆ ಹೋಗುವ ಮಹಿಳೆಗೆ ರೈಲಿನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು.
ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಆಂಬುಲೆನ್ಸ್ ಮೂಲಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ.