ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸಮಾಜಕ್ಕೆ ಪೂರಕ: ಗೃಹಲಕ್ಷ್ಮಿ ಕೋಟಿ ಸಂಭ್ರಮದಲ್ಲಿ ಗ್ರಾಮ ಸ್ವರಾಜ್ಯ ಪ್ರತಿಷ್ಠಾನದ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮೂಡಬಿದ್ರೆ ಸಮಾಜ ಮಂದಿರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಡಬಿದ್ರೆ ತಾಲ್ಲೂಕು, ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ದ.ಕ. ಹಾಗೂ ಬಿಲ್ಲವ ಸಂಘ ಇರುವೈಲು ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ “ಗೃಹಲಕ್ಷ್ಮಿ ಕೋಟಿ ಸಂಭ್ರಮ” ಕಾರ್ಯಕ್ರಮ ಭಾನುವಾರ ಯಶಸ್ವಿಯಾಗಿ ನಡೆಯಿತು. ಮೂಡಬಿದ್ರೆ ತಾಲ್ಲೂಕಿಗೆ ಗೃಹಲಕ್ಷ್ಮಿ ಯೋಜನೆಯಡಿ ₹105 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆ ಸಂಭ್ರಮಾಚರಣೆಗೆ ವಿಶೇಷ ಮೆರುಗು ದೊರೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಮಹತ್ವದ ಬದಲಾವಣೆ ತರಲು ಕಾರಣವಾಗಿದ್ದು, ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಭದ್ರತೆಯ ದೃಷ್ಟಿಯಿಂದ ಗೃಹಲಕ್ಷ್ಮಿ ಯೋಜನೆ ಒಂದು ಮೈಲುಗಲ್ಲಿನ ಸಾಧನೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮ ಸ್ವರಾಜ್ಯ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು ಮಾತನಾಡಿ, ಆರೋಗ್ಯ ಜಾಗೃತಿ ಮೂಡಿಸುವ ಹಾಗೂ ಜನಸೇವೆಗೆ ಪೂರಕವಾಗಿರುವ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಸಮಾಜದ ಹಿತದೃಷ್ಟಿಯಿಂದ ಅತ್ಯಂತ ಶ್ಲಾಘನೀಯ ಕಾರ್ಯಗಳಾಗಿವೆ ಎಂದು ಹೇಳಿದರು. ಸಮಾಜದ ಎಲ್ಲ ವರ್ಗದ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದ್ದು, ಇಂತಹ ಕಾರ್ಯಕ್ರಮಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿವೆ ಎಂದು ಅವರು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅದ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗೋಕರ್ಣನಾಥೇಶ್ವರ ದೇವಸ್ಥಾನ ಕುದ್ರೋಳಿಯ ಕೋಶಾಧಿಕಾರಿ ಪದ್ಮನಾಭ ಆರ್. ಪೂಜಾರಿ,
ಮೂಡಬಿದ್ರೆ ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಸ್ವಾಗತಿಸಿದರು,ಈ ಸಂಧರ್ಭದಲ್ಲಿ ಕೆಎಂಎಫ್‌ನ ಸುಚರಿತ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!