ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಉಡುಪಿ: ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.


ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ಪರಿಣಾಮ ಬೈಕ್ ಸಹಿತ ಕೆಳಗೆ ಬಿದ್ದ ಪ್ರದೀಪ್ ಪೂಜಾರಿ ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಅನೂಪ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!