ವಿಟ್ಲ, ಜೂನ್ 10: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ವಿಟ್ಲ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಉದ್ಘಾಟಿಸಿದರು.
ಸ್ಥಳೀಯ ಸಂಸ್ಥೆ ವಿಟ್ಲ ಅಧ್ಯಕ್ಷ ಸುದರ್ಶನ ಪಡಿಯಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗೌರವಾಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ವಿಠ್ಠಲ ಎಜುಕೇಶನ್ ಸೊಸೈಟಿ ಸದಸ್ಯ ನಿತ್ಯಾನಂದ ನಾಯಕ್, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಆದೇಶಗಳ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಬಂಟ್ವಾಳ ದೈಹಿಕ ಪರಿವೀಕ್ಷಕರಾದ ಆಶಾ ನಾಯಕ್, ಸ್ಕೌಟ್-ಗೈಡ್ ವಯಸ್ಕ ಸಂಪನ್ಮೂಲ ಆಯುಕ್ತ ಎಂ. ಜೆ. ಕಜೆ, ಜಿಲ್ಲಾ ಕಾರ್ಯದರ್ಶಿ ಪ್ರದೀಪ್ ಕುಮಾರ್, ತರಬೇತಿ ಆಯುಕ್ತ ಶಾಂತಾರಾಮ್ ಪ್ರಭು ಹಾಗೂ ಸಂಘಟನಾ ಆಯುಕ್ತ ಭರತ್ ರಾಜ್ ಉಪಸ್ಥಿತರಿದ್ದರು.


ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರತೀಪ್ ಎ. ಆರ್. ಅವರು ಸ್ವಾಗತಿಸಿದರು. ಜಿಲ್ಲಾ ಪ್ರತಿನಿಧಿ ನಾರಾಯಣ ನಾಯಕ್ ವಾರ್ಷಿಕ ವರದಿ ಮಂಡಿಸಿದರು. ಜತೆ ಕಾರ್ಯದರ್ಶಿ ಜಯಶ್ರೀ ವಂದಿಸಿದರು. ಕೋಶಾಧಿಕಾರಿ ವಿಶ್ವನಾಥ ಗೌಡ ಕುಳಾಲು ಕಾರ್ಯಕ್ರಮವನ್ನು ನಿರೂಪಿಸಿದರು.
ವಿಟ್ಲ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಲೀಡರ್‌ಗಳಾದ ಶ್ರೀಮತಿ ಜಲಜಾಕ್ಷಿ ಮತ್ತು ಶ್ರೀನಿವಾಸ ಅವರು ಹಾಗೂ ಜತೆ ಕಾರ್ಯದರ್ಶಿಗಳಾದ ಶ್ರೀಮತಿ ವೀಣಾ ದೇವಿ ಮತ್ತು ಇಸ್ಮಾಯಿಲ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.


