ಪ್ರಧಾನಿ ನರೇಂದ್ರ ಮೋದಿ ದೀರ್ಘಾಯುಷ್ಯಕ್ಕಾಗಿ ಶ್ರೀ ನೀಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬಂಟ್ವಾಳ, ಜೂ. 10: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಗಳ ಸಾಲಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಹಿನ್ನೆಲೆಯಲ್ಲಿ, ಅವರ ದೀರ್ಘಾಯುಷ್ಯ, ಆಯುರಾರೋಗ್ಯ ಹಾಗೂ ದೇಶದ ಪ್ರಗತಿಗಾಗಿ ಮೋಗರ್ನಾಡು ಸಾವಿರ ಸೀಮೆಯ ಒಡೆಯ ಶ್ರೀ ನೀಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವಗುರು ಭಾರತ ಹಾಗೂ ಆತ್ಮನಿರ್ಭರ ಭಾರತದ ಸಂಕಲ್ಪ ಇನ್ನಷ್ಟು ಬಲಗೊಳ್ಳಲಿ ಹಾಗೂ ದೇಶವು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಹೆಗ್ಗಳಿಕೆ ಸಾಧಿಸಲಿ ಎಂದು ಪ್ರಾರ್ಥಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಂಟ್ವಾಳ ಮಂಡಲ ರೈತ ಮೋರ್ಚಾ ಉಪಾಧ್ಯಕ್ಷ ಹಾಗೂ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಪ್ರಭಾಕರ ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಮುಖ ಗೋಪಾಲ್ ಪೂಜಾರಿ, ಯುವ ಮೋರ್ಚಾ ಕಾರ್ಯದರ್ಶಿ ಕೌಶಿಲ್ ಶೆಟ್ಟಿ, ಬಂಟ್ವಾಳ ಮಂಡಲ ಒಬಿಸಿ ಕಾರ್ಯದರ್ಶಿ ಯತೀಶ್ ಮೂಳಿಕೊಡಂಗೆ, ಶಕ್ತಿ ಕೇಂದ್ರದ ಪ್ರಮುಖ ಪ್ರವೀಣ್ ಕುಮಾರ್, ಬೂತ್ ಅಧ್ಯಕ್ಷ ಮಹಾಬಲ ಸಾಲಿಯನ್, ಶೇಖರ್ ಕೊಟ್ಟಾರಿ ಅಮ್ಟೂರು, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಬೈದರಡ್ಕ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಆನಂದ ಎ. ಶಂಭೂರು, ಜಿಲ್ಲಾ ಒಬಿಸಿ ಮೋರ್ಚಾ ಪ್ರಮುಖ ಚಿದಾನಂದ ಪಟ್ಟೆಕೋಡಿ, ವಾಣಿ ಶೆಟ್ಟಿ, ಉಮೇಶ್ ಟಿ. ಪೂಜಾರಿ, ಜೀತೇಶ್ ಶೆಟ್ಟಿ ಬಾಳಿಕೆ ಹಾಗೂ ಪವನ್ ಶೆಟ್ಟಿ ಬಾಳಿಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!