ಪುತ್ತೂರು, ಜೂ.12: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಮನ್ ನಾಯಕ್ ಬಂಧಿತ ಆರೋಪಿ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2018ರಡಿ ಭಾರತೀಯ ದಂಡ ಸಂಹಿತೆಯ ಕಲಂ 448, 506, 354 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಪ್ರದೇಶದಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.