ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ

ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳು ಹಾಗೂ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ.

ಜೂನ್ 15ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೆ ಜಲ್ಲಿ, ಕಲ್ಲು ಹಾಗೂ ಬೃಹತ್ ಸರಕು ಸಾಗಣೆ ಮಾಡುವ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.

ನಿಷೇಧಿತ ವಾಹನಗಳು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಹಾವೇರಿ ಜಿಲ್ಲೆಗಳ ಸಾವಿರಾರು ನಾಗರಿಕರು ತುರ್ತು ವೈದ್ಯಕೀಯ ಚಿಕಿತ್ಸೆಗಳಿಗಾಗಿ ಮಣಿಪಾಲ, ಉಡುಪಿ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಇದೇ ಮಾರ್ಗವನ್ನು ಅವಲಂಬಿಸಿದ್ದಾರೆ. ಮಳೆಗಾಲದಲ್ಲಿ ಸಂಭವಿಸಬಹುದಾದ ರಸ್ತೆ ಅವಘಡಗಳು ಹಾಗೂ ಸಂಚಾರ ಅಡಚಣೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.

ಆದೇಶ ಜಾರಿಯ ಅವಧಿಯಲ್ಲಿ ವಾಹನ ಸವಾರರು ಮತ್ತು ಸರಕು ಸಾಗಣೆದಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!