ಬಂಟ್ವಾಳ : ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಿಂದ ನಾಪತ್ತೆ

ಬಂಟ್ವಾಳ : ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಿಂದ ನಾಪತ್ತೆತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಯುವತಿಯೊಬ್ಬಳು ಮನೆಯಿಂದ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವತಿಯನ್ನು ಬರಿಮಾರು ನಿವಾಸಿ ಮಾದೇವಿ (21) ಎಂದು ಗುರುತಿಸಲಾಗಿದೆ. ಈಕೆ ಸುಮಾರು ಆರು ತಿಂಗಳ ಕಾಲ ಧಾರವಾಡದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿದ್ದು, ಬಳಿಕ ಕೆಲಸ ಬಿಟ್ಟು ಕಳೆದ ಐದು ತಿಂಗಳಿನಿಂದ ತಂದೆ-ತಾಯಿ ಜತೆ ಮನೆಯಲ್ಲಿ ವಾಸವಾಗಿದ್ದಳು.

ಜೂನ್ 11ರಂದು ಬೆಳಿಗ್ಗೆ ತಂದೆ-ತಾಯಿ ಕೆಲಸಕ್ಕೆ ತೆರಳಿದ್ದು, ಸಂಜೆ ಮನೆಗೆ ಮರಳಿದಾಗ ಮಗಳು ಮನೆಯಲ್ಲಿ ಕಾಣಿಸಿರಲಿಲ್ಲ. ಸಂಬಂಧಿಕರು ಹಾಗೂ ಪರಿಚಯಸ್ಥರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ದೊರೆತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಯುವತಿಗೆ ಪರಿಚಯವಿದ್ದ ಯುವಕನ ಮೊಬೈಲ್‌ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿದ್ದು, ಮನೆಯಿಂದ ತೆರಳುವ ವೇಳೆ ಆಕೆ ಸ್ವಲ್ಪ ಪ್ರಮಾಣದ ಚಿನ್ನಾಭರಣ ಹಾಗೂ ಹಣವನ್ನು ಕೂಡ ತೆಗೆದುಕೊಂಡು ಹೋಗಿರುವ ಶಂಕೆಯನ್ನು ಪೋಷಕರು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!