ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು.

ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಮಠದ ವತಿಯಿಂದ ಅನಂತ್ ಅಂಬಾನಿ ಅವರಿಗೆ ಗೌರವಪೂರ್ವಕ ಸ್ವಾಗತ ಕೋರಲಾಯಿತು. ಭೇಟಿ ವೇಳೆ ಮಠದ ಅಧಿಕಾರಿಗಳು, ಭಕ್ತರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಅನಂತ್ ಅಂಬಾನಿ ಅವರ ಭೇಟಿ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿತ್ತು.

SHARE
Loading spinner

Leave a Reply

Your email address will not be published. Required fields are marked *

error: Content is protected !!