ಮಂಗಳೂರಿನಲ್ಲಿ ಎಸ್‌ಐಆರ್ ಸಹಾಯವಾಣಿ ಕೇಂದ್ರಕ್ಕೆ ಚಾಲನೆ; ಸಾರ್ವಜನಿಕರಿಗೆ ಮಾಹಿತಿ ನೀಡಲು ಐವನ್ ಡಿಸೋಜಾ ಮುಂದಾಳತ್ವ

ಮಂಗಳೂರು : ವಿಧಾನ ಪರಿಷತ್ ಸದಸ್ಯರು ಹಾಗೂ ಕೆ.ಪಿ.ಸಿ.ಸಿ. ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ಇಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ತಮ್ಮ ಶಾಸಕರ ಕಚೇರಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಎಸ್‌ಐಆರ್ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್‌ಗಳಾದ ಭಾಸ್ಕರ್ ಮೊಯ್ಲಿ ಹಾಗೂ ಶಶಿಧರ್ ಹೆಗ್ಡೆ, ಮಂಗಳೂರು ದಕ್ಷಿಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಬ್ದುಲ್ ಸಲೀಂ ಹಾಗೂ ಪ್ರಕಾಶ್ ಬಿ. ಸಾಲ್ಯಾನ್, ಮಾಜಿ ಕಾರ್ಪೊರೇಟರ್ಗಳಾದ ನವೀನ್ ಡಿಸೋಜಾ, ಚೇತನ್ ಕುಮಾರ್, ಸತೀಶ್ ಪೆಂಗಲ್, ಪದ್ಮನಾಭ ಪನಿಕರ್, ಮುಖಂಡರಾದ ಮನೀಶ್ ಬೋಳಾರ್, ಮೊಹಮ್ಮದ್ ಬಶೀರ್ ಹಾಗೂ ಅರುಣ್ ಕ್ರಸ್ತ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!