ಬಂಟ್ವಾಳ,: ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆಯಲ್ಲಿ ನಡೆದಿದೆ.
ಅಲ್ಲಿಪಾದೆಯ ಅನೇಜ ಛಾಯ ಅವರ ಪುತ್ರಿ ಅರ್ನಿಕಾ (5) ಮೃತ ಬಾಲಕಿ. ಆಕೆ ಬಂಟ್ವಾಳ ದೇವಳ ಶಾಲೆಯ ಯುಕೆಜಿ ವಿದ್ಯಾರ್ಥಿನಿಯಾಗಿದ್ದಳು.
ಕಳೆದ ಶುಕ್ರವಾರ ಶಾಲೆಗೆ ತೆರಳಿದ್ದ ಬಾಲಕಿಗೆ ಬಳಿಕ ಜ್ವರ ಕಾಣಿಸಿಕೊಂಡಿದ್ದು, ಶನಿವಾರ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಳು. ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಾಲಕಿಯ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಶಾಲಾ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.