ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: AI, ಮೆಕ್ಯಾನಿಕಲ್ ಡಿಪ್ಲೋಮಾ ಕೋರ್ಸ್‌ಗಳಲ್ಲಿ ಪ್ರವೇಶ ಆರಂಭ

ಮಂಗಳೂರು:ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಕೆಲವು ಕೋರ್ಸ್‌ಗಳಲ್ಲಿ ಸೀಟುಗಳು ಖಾಲಿ ಉಳಿದಿವೆ ಎಂದು ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಷಿನ್ ಲರ್ನಿಂಗ್ ಕೋರ್ಸ್‌ಗಳಲ್ಲಿ ಖಾಲಿ ಸೀಟುಗಳಿದ್ದು, ಆಸಕ್ತ ವಿದ್ಯಾರ್ಥಿಗಳಿಗೆ ನೇರ ಪ್ರವೇಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಖಾಲಿ ಇರುವ ಸೀಟುಗಳಿಗೆ “ಮೊದಲು ಬಂದವರಿಗೆ ಮೊದಲ ಆದ್ಯತೆ” ಆಧಾರದ ಮೇಲೆ ಕಾಲೇಜಿನಲ್ಲೇ ಸ್ಥಳದಲ್ಲೇ ಪ್ರವೇಶಾತಿ ನೀಡಲಾಗುವುದು. ಈ ಎಲ್ಲಾ ಕೋರ್ಸ್‌ಗಳ ಅವಧಿ ನಾಲ್ಕು ವರ್ಷಗಳಾಗಿದ್ದು, ಅಂತಿಮ ವರ್ಷದ ಅವಧಿಯಲ್ಲಿ ಪ್ರತಿಷ್ಠಿತ ಕೈಗಾರಿಕೆಗಳು ಹಾಗೂ ಕಂಪೆನಿಗಳಲ್ಲಿ ಒಂದು ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಇಂಟರ್ನ್‌ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳು ಪ್ರತಿ ತಿಂಗಳು ರೂ.18,000ರಿಂದ ರೂ.23,000ರವರೆಗೆ ಸ್ಟೈಪೆಂಡ್ ಪಡೆಯಲಿದ್ದು, ಕೈಗಾರಿಕಾ ಅನುಭವದ ಜೊತೆಗೆ ಉದ್ಯೋಗಾವಕಾಶಗಳಿಗೂ ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕ ಗೌತಮ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!