ವಾಚನಾ ವಾರಾಚರಣೆಗೆ ಚಾಲನೆ: ಓದುವಿಕೆ ಜ್ಞಾನ ವೃದ್ಧಿಗೆ ಪ್ರಮುಖ ಸಾಧನ – ರಾಜೇಶ್ವರಿ.ಬಿ

ಚೇವಾರು, ಜೂನ್ 20: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ವಾರಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಜೇಶ್ವರಿ.ಬಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಓದುವಿಕೆ ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಪ್ರಮುಖ ಸಾಧನವಾಗಿದ್ದು, ಉತ್ತಮ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರವಿಕುಮಾರ್ ವಹಿಸಿದ್ದು, ವಾಚನಾ ವಾರಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಶಾಲಾ ಸಂಪನ್ಮೂಲ ಗುಂಪಿನ ಕಾರ್ಯದರ್ಶಿ ಪ್ರೀಮಾ ಕ್ರಾಸ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕ ಮೊಹಮ್ಮದ್ ಫಾಹಿಸ್ ಸ್ವಾಗತಿಸಿದರು. ಶಿಕ್ಷಕಿ ಗೀತಾಂಜಲಿ ವಂದಿಸಿದರು. ಶಿಕ್ಷಕರಾದ ಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಕರಾದ ಸಾತ್ವಿಕ್ ಎನ್., ಹ್ಯಾರಿಸ್, ಕವಿತಾ ಟೀಚರ್ ಹಾಗೂ ಗೋಪಾಲಕೃಷ್ಣ ಭಟ್ ಸಹಕರಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!