ಜೂನ್ 23ರಂದು ಪುತ್ತೂರು ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ …. !

ಪುತ್ತೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವ್ಯಾಪ್ತಿಯ ಪುತ್ತೂರು ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಲಯನ್ ಮಂಜುನಾಥ್ ಗೌಡ, ಕಾರ್ಯದರ್ಶಿಯಾಗಿ ಲಯನ್ ಆನಂದ ಆಚಾರ್ಯ ಹಾಗೂ ಕೋಶಾಧಿಕಾರಿಯಾಗಿ ಲಯನ್ ಸುಂದರ ಗೌಡ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂನ್ 23ರಂದು (ಮಂಗಳವಾರ) ಸಂಜೆ 7 ಗಂಟೆಗೆ ಪುತ್ತೂರಿನ ಲಯನ್ ಸೇವಾ ಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಂಗಳೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಲಯನ್ ರಾಜೇಶ್ ಎಂ. ಕಾಮತ್ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಲಿದ್ದಾರೆ.

ಸಮಾರಂಭದಲ್ಲಿ ಲಯನ್ಸ್ ಸಂಘಟನೆಯ ವಿವಿಧ ಹಂತಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!