ಟೋಲ್ ಶುಲ್ಕ ತಪ್ಪಿಸಲು ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಶುಲ್ಕ ಪಾವತಿಸದೇ ವಾಹನಗಳು ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ.

ಇತ್ತೀಚೆಗೆ ಸಿಪಿಐಎಂ ಪಕ್ಷದ ಕಾರ್ಯಕರ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ವೊಂದು ಟೋಲ್ ಶುಲ್ಕ ಪಾವತಿಸದೇ ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಹಾನಿಗೊಳಿಸಿ ಸ್ಥಳದಿಂದ ತೆರಳಿರುವುದು ವರದಿಯಾಗಿದೆ.

ಅಷ್ಟೇ ಅಲ್ಲದೆ, ಇದೇ ಟೋಲ್ ಪ್ಲಾಜಾದಲ್ಲಿ ಹಲವು ವಾಹನಗಳು ಟೋಲ್ ಪಾವತಿಸುವುದನ್ನು ತಪ್ಪಿಸಲು ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆಗಳು ನಡೆದಿವೆ ಎನ್ನಲಾಗಿದೆ. ಕೆಲ ವಾಹನ ಚಾಲಕರು ಟೋಲ್ ತಪ್ಪಿಸಲು ಏಕಮುಖ ರಸ್ತೆಯಲ್ಲೇ (ಒನ್‌ವೇ) ಸಂಚರಿಸಿ ನಿಯಮ ಉಲ್ಲಂಘನೆ ನಡೆಸಿರುವ ಆರೋಪವೂ ಕೇಳಿಬಂದಿದೆ.

ಈ ಎಲ್ಲ ಘಟನೆಗಳ ದೃಶ್ಯಾವಳಿಗಳು ಟೋಲ್ ಪ್ಲಾಜಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಟೋಲ್ ಪ್ಲಾಜಾದ ಆಸ್ತಿ ಹಾನಿ ಹಾಗೂ ಸಂಚಾರ ನಿಯಮ ಉಲ್ಲಂಘನೆ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!