200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20 ಸಾವಿರ ಉಚಿತ ಸಮವಸ್ತ್ರ ವಿತರಣೆ

ಉಡುಪಿ, ಜೂನ್ 24: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಯೋಗದಲ್ಲಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20,000 ಜೋಡಿ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ವೆಬ್‌ಸೈಟ್ ಅನಾವರಣ ಕಾರ್ಯಕ್ರಮ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್. ಶೆಟ್ಟಿ, ಕನ್ನಡ ಶಾಲೆಗಳು ನಮ್ಮ ಭಾಷೆಯ ಜೀವನಾಡಿಯಾಗಿದ್ದು, ಅವುಗಳನ್ನು ಉಳಿಸಲು ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ ಶಾನುಭಾಗ್ ಅವರು ಶಿಕ್ಷಕರು ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಮಕ್ಕಳಲ್ಲಿ ನ್ಯಾಯಪ್ರಜ್ಞೆ ಬೆಳೆಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿಯನ್ನು ನಿವೃತ್ತ ಪ್ರಾಧ್ಯಾಪಕ ಹಾಗೂ ಕೃಷಿ ಲೇಖಕ ಎನ್. ನರೇಂದ್ರ ರೈ ದೆರ್ಲ ಅವರಿಗೆ ಪ್ರದಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಯಶ್‌ಪಾಲ್ ಸುವರ್ಣ ವಹಿಸಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!